ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ
ಬಸ್ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತರ ಬಸ್ಗಳ ಕೊರತೆ ಹೆಚ್ಚಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಲು ಸಾಧ್ಯವಾಗದೇ ಪರದಾಡುವಂತಾಗಿದೆ.. ಬೆಳಿಗ್ಗೆ 6 ಗಂಟೆಯಿಂದಲೂ ಗಂಗಾವತಿಯಲ್ಲಿರುವ ಕಾಲೇಜಿಗೆ ಹೋಗಬೇಕಾದ ವಿದ್ಯಾರ್ಥಿಗಳು ಬಸ್ಗಾಗಿ ಕಾದು ಕಾದು ಸುಸ್ತಾಗಿ ದಿಢೀರ್ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ರು. ದಿನನಿತ್ಯವೂ ಇದೇ ಗೋಳಾಗಿದೆ ಯಾರೂ ಸಹ ಸೂಕ್ತ ಕ್ರಮವನ್ನು ಜರುಗಿಸದೇ ನಮಗೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.. ಸ್ಥಳಕ್ಕೆ ಕನಕಗಿರಿ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಪ್ರಯತ್ನ ಮಾಡಿದರು.