ಶೈಕ್ಷಣಿಕ ಸಮಸ್ಯೆ ಪರಿಹರಿಸಿ ಎಂದ ವಿದ್ಯಾರ್ಥಿಗಳು

ಶನಿವಾರ, 29 ಸೆಪ್ಟಂಬರ್ 2018 (16:09 IST)
ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಅಖಿಲ ಭಾರತ ವಿದ್ಯಾರ್ಥಿ  ವತಿಯಿಂದ  ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದಿನನಿತ್ಯ ವಿದ್ಯಾರ್ಥಿಗಳ ಗೋಳು ಕೇಳುವವರೇ ಇಲ್ಲ ಪ್ರತಿದಿನ ವಿದ್ಯಾರ್ಥಿಗಳು ಕಾಲೇಜಿಗೆ ಬರುವುದಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇರುವುದಿಲ್ಲ ಮತ್ತು ತಾಲ್ಲೂಕಿನ ಪ್ರತಿಯೊಂದು ಹಾಸ್ಟೆಲ್ ನಲ್ಲಿ ಒಳ್ಳೆಯ ವ್ಯವಸ್ಥೆ ಇರುವುದಿಲ್ಲ. ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಯಾದಗಿರಿ ತಾಲ್ಲೂಕಿನ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದಿಂದ ಮಾರ್ಕೆಟ್ ಹಾಗೂ ಗಾಂಧಿ ಸರ್ಕಲ್ ನಿಂದ ವಿಧಾನಸೌಧದವರೆಗೆ ಉಗ್ರವಾದ ಹೋರಾಟವನ್ನು ಮಾಡಲಾಯಿತು. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಸುಮಾರು ಎರಡು ವರ್ಷಗಳಿಂದ ಸ್ಕಾಲರ್ ಶಿಪ್ ಬಂದಿಲ್ಲ. ಅಧಿಕಾರಿಗಳಿಗೆ ಕೇಳಿದರೆ ಬಜೆಟ್ ಇಲ್ಲ ಅಂತ ಸುಳ್ಳು ನೆಪ ಹೇಳುತ್ತಿದ್ದಾರೆ.  ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸರಿಪಡಿಸಬೇಕೆಂದು ತಾಲೂಕು ದಂಡಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ವಿದ್ಯಾರ್ಥಿಗಳು ಸಲ್ಲಿಸಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ