ನಾಳೆ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನಲೆ ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸೋಮವಾರ, 8 ಫೆಬ್ರವರಿ 2021 (11:22 IST)
ಬೆಂಗಳೂರು : ನಾಳೆ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ  ಹಿನ್ನೆಲೆ ಇಂದು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಮಧ್ಯಾಹ್ನ 12ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.  ಹಾಗಾಗಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದಾರೆ.

ಹಾಗೇ ನಾಳೆ ಪರಿಷತ್ ಸಭಾಪತಿ ಚುನಾವಣೆ ಇರುವ ಹಿನ್ನಲೆಯಲ್ಲಿ ಇಂದು ಸಂಜೆ 6ಕ್ಕೆ  ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಎಂಎಲ್ ಸಿಗಳ ಸಭೆ ಕರೆದಿದ್ದಾರೆ. ಹೊರಟ್ಟಿಗೆ ಬೆಂಬಲ ಕೊಡುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ