ಗೃಹಿಣಿಯ ಕುತ್ತಿಗೆಗೆ ಚಾಕು ಇಟ್ಟು ನೆರೆಮನೆಯವ ಮಾಡಿದ ಇಂತಹ ನೀಚ ಕೆಲಸ

ಗುರುವಾರ, 17 ಜನವರಿ 2019 (06:56 IST)
ಬೆಂಗಳೂರು : ನೆರೆಮನೆಯ ವ್ಯಕ್ತಿಯೊಬ್ಬ ಗೃಹಿಣಿಯೊಬ್ಬಳ ಕುತ್ತಿಗೆಗೆ ಚಾಕು ಇಟ್ಟು ಹೆದರಿಸಿ ಅತ್ಯಾಚಾರ ಮಾಡಿದ ಘಟನೆ ನಗರದ  ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ನೆರೆಮನೆಯ ಜಟ್ಟಪ್ಪ ಇಂತಹ ನೀಚ ಕೃತ್ಯ ಎಸಗಿದ ಪಾಪಿಯಾಗಿದ್ದು, ಈತ ಪಕ್ಕದ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ  ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಗೆ ಚಾಕು ಇಟ್ಟು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಗೃಹಿಣಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಈ ಬಗ್ಗೆ  ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ