ಪ್ರೇಮ ನಿರಾಕರಣೆ, ಯುವಕ ಆತ್ಮಹತ್ಯೆ

ಶನಿವಾರ, 29 ಜುಲೈ 2023 (17:30 IST)
ಪ್ರೀತಿ ಫಲಿಸದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್​​ನ ಜೆಎಸ್ ನಗರದಲ್ಲಿ ನಡೆದಿದೆ. ನವೀನ ಮೂಲತಃ ಕೊಳ್ಳೆಗಾಲದ ಯುವಕನಾಗಿದ್ದು, ಬೆಂಗಳೂರಿನಲ್ಲಿ ಬಾಳೆಮಂಡಿ ಕೆಲಸ ಮಾಡಿಕೊಂಡಿದ್ದ. ಈ ನಡುವೆ ಪ್ರೀತಿಸ್ತಿದ್ದ ಯುವತಿ ಪ್ರೇಮ ನಿರಾಕರಣೆ ಮಾಡಿದ ಹಿನ್ನೆಲೆ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿಯತಮೆ ಹೆಸರನ್ನು ಡೆತ್​​​ನೋಟ್​​​ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನ ಘಟನೆ ಹಿನ್ನೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಮಾಡಲು ರವಾನೆ ಮಾಡಲಾಗಿದೆ. ಈ ಸಂಬಂಧ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ