ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ
ಕಿಚ್ಚ ಸುದೀಪ್ ಅವರು ‘ವಿಕ್ರಾಂತ್ ರೋಣ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಸಚಿವರ ಜೊತೆ ಉಪಹಾರ ಸೇವಿಸಿ ಬಳಿಕ ಸಿನಿಮಾ ಪ್ರಚಾರಕ್ಕೆ ಸುದೀಪ್ ತೆರಳಿದ್ದಾರೆ. ಇಂಡಿಯಾ ಗೇಟ್ ಬಳಿ ಸುದೀಪ್ ಪ್ರಚಾರ ಆರಂಭಿಸಿದ್ದಾರೆ. ಈ ಕುರಿತು ಪ್ರಲ್ಹಾದ ಜೋಶಿ ಅವರು ಸೋಶಿಯಲ್ ಮೀಡಿಯಾದಲ್ಲಿ, ‘ಇಂದು ದೆಹಲಿಯ ನನ್ನ ನಿವಾಸಕ್ಕೆ ಕನ್ನಡದ ಖ್ಯಾತ ನಟ ಸುದೀಪ್ ಅವರು ಭೇಟಿ ನೀಡಿ ವಿವಿಧ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು’ ಎಂದು ಬರೆದುಕೊಂಡಿದ್ದಾರೆ.