ಪೈಲ್ವಾನ್ ಪೈರಸಿಗೆ ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

ಶುಕ್ರವಾರ, 20 ಸೆಪ್ಟಂಬರ್ 2019 (21:59 IST)
ನಟ ಸುದೀಪ್ ತಮ್ಮ ಮೆಚ್ಚಿನ ಪೈಲ್ವಾನ್ ಚಲನಚಿತ್ರ ಪೈರಸಿ ಆಗಿರೋದಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮಾಡಿರೋ ಸುದೀಪ್, ಪೈರಸಿ ಮೂಲವನ್ನು ತಿಳಿಯುವವರೆಗೂ ನಾನು ವಿಶ್ರಾಂತಿ ಪಡೆಯುವುದಿಲ್ಲ. ನಮ್ಮ ಕಠಿಣ ಶ್ರಮವನ್ನ ಹಾಳು ಮಾಡಲು ನಾನು ಬಿಡುವುದಿಲ್ಲ. ಪೈರಸಿ ಮಾಡಿದವರಿಗಿಂತ ಪೈರಸಿ ಬಗ್ಗೆ ನಾನು ಹೆಚ್ಚು ಆಸಕ್ತಿ ಹೊಂದಿದ್ದೇನೆ. ಹೀಗಂತ ಬರೆದು ತಮ್ಮ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ.

“ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೇನೂ ಗೊತ್ತಿಲ್ಲ. ನನ್ನ ಮೌನ, ತಾಳ್ಮೆ, ಎರಡನ್ನೂ ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳುಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ. ಇದರ ಹಿಂದಿರುವ ವ್ಯಕ್ತಿಗಳನ್ನು ಬಯಲಿಗೆ ತಂದರೆ ನೆಮ್ಮದಿಯ ನಿದ್ರೆ ಬರುತ್ತದೆ. ಆ ಸಂದರ್ಭ ಶೀಘ್ರವಾಗಿ ಬರುತ್ತದೆ ಎಂದಿದ್ದಾರೆ.

ಪೈಲ್ವಾನ್ ಸಿನಿಮಾದ ಲಿಂಕ್ ಷೇರ್ ಮಾಡಿಕೊಂಡಿದ್ದಕ್ಕೆ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧನ ಮಾಡಿದ್ದು, ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ