ನಿನ್ನೆ ಸದನದಲ್ಲಿ ಸುಧಾಕರ್, ರಮೇಶ್ ಕುಮಾರ್ ವಾಕ್ಸಮರ ನಡೆದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಕಾರಣ ಇಂದು ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ನಾಯಕರ ಸಭೆ ಕರೆದಿದ್ದು, ಈ ಬಗ್ಗೆ ಚರ್ಚಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.