ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ: ವಿಚಾರಣೆಗೆ ವಿನಯಿತಿ ನೀಡಲು ಚಂದ್ರಶೇಖರ ಶ್ರೀ ಮನವಿ
ಸ್ವಾಮೀಜಿ ನೀಡಿದ ವಿವಾದಾತ್ಮಕ ಹೇಳಿಕೆ ಹೀಗಿದೆ: ನಗರದ ಫ್ರೀಡಂ ಪಾರ್ಕ್‍ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ್ದ ಅವರು ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ ಎಂದಿದ್ದರು.