ಸಕ್ಕರೆ ನಿರ್ದೇಶನಾಲಯ ಬೆಳಗಾವಿಗೆ ಶಿಫ್ಟ್
ಕೊವಿಡ್ ಸಂದರ್ಭದಲ್ಲಿ ನಿಧನರಾಗಿರುವ ನೇಕಾರರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಟ್ಟಿದ್ದೇವೆ ಅಂತಾ ಬೆಳಗಾವಿಯಲ್ಲಿ ಕೈಮಗ್ಗ ಹಾಗೂ ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ಕಾಂಗ್ರೆಸ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳೆ ಪ್ರಶ್ನೆಗೆ ಉತ್ತರಿಸಿದ ಮುನೇನಕೊಪ್ಪ, ಈ ಅಧಿವೇಶನ ಮುಗಿದ ತಕ್ಷಣ ಬೆಂಗಳೂರಿನಲ್ಲಿರುವ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯವನ್ನು ಬೆಳಗಾವಿಗೆ ಸ್ಥಳಾಂತರಿಸುತ್ತೇವೆ. ಬೆಳಗಾವಿ ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರ ಮಾಡುತ್ತೇವೆ. ಉಳಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿನ ಸಕ್ಕರೆ ಕಾರ್ಖಾನೆಗಳಿಗಾಗಿ ಬೆಂಗಳೂರಿನಲ್ಲಿಯೂ ಒಬ್ಬ ಅಧಿಕಾರಿಯನ್ನು ನೇಮಕ ಮಾಡುತ್ತೇವೆ. ರಾಜ್ಯದಲ್ಲಿರುವ ಒಟ್ಟು 73 ಸಕ್ಕರೆ ಕಾರ್ಖಾನೆಗಳಲ್ಲಿ 60 ಈ ಭಾಗದಲ್ಲಿವೆ. ಉಳಿದ 14 ಕಾರ್ಖಾನೆಗಳಿಗೆ ಬೆಂಗಳೂರಿನಲ್ಲಿಯೂ ಅಧಿಕಾರಿ ಇರುತ್ತಾರೆ ಅಂತಾ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ರು.