ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

geetha

ಸೋಮವಾರ, 12 ಫೆಬ್ರವರಿ 2024 (17:00 IST)
ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಗೋಪಾಲ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಕಾವ್ಯ (22) ಮೃತ ಯುವತಿಯಾಗಿದ್ದು, ಒಂದು ವರ್ಷದ ಮಗುವನ್ನು ಬಿಟ್ಟು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 
ಕುಣಿಗಲ್‌ ಮೂಲದ ಕಾವ್ಯಾಗೆ ಎರಡು ವರ್ಷದ ಹಿಂದೆ ಪ್ರವೀಣ್‌ ಎಂಬುವವರೊಡನೆ ಮದುವೆಯಾಗಿತ್ತು. ಒಂದು ವರ್ಷದ ಹಿಂದೆ ಮಗುವೂ ಜನಿಸಿತ್ತು. ಆತ್ಮಹತ್ಯೆಗೆ ಕಾರಣವೇನೆಂದು ಇದುವರೆಗೂ ತಿಳಿದುಬಂದಿಲ್ಲ. ರಾಜಗೋಪಾಲನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ