ಮುಂದುವರಿದ ರೈತರ ಆತ್ಮಹತ್ಯೆ ಸರಣಿ: ಇಬ್ಬರು ಅನ್ನದಾತರು ಕಣ್ಮರೆ

ಭಾನುವಾರ, 26 ಜುಲೈ 2015 (15:57 IST)
ಸರ್ಕಾರ ಏನೇ ಪ್ರಯತ್ನಗಳನ್ನು ಮಾಡಿದರೂ ಕೂಡ ರಾಜ್ಯದಲ್ಲಿ ರೈತರ ಆತ್ಮಹತ್ಯೆಯನ್ನು ತಡೆಯಲು ವಿಫಲವಾಗಿದೆ. 
 
ಹೌದು, ರಾಜ್ಯದಲ್ಲಿ ರೈತರ ಆತ್ಮಹತ್ಯೆ ಇಂದೂ ಮುಂದುವರಿದಿದ್ದು, ಇಂದು ಮಧ್ಯಾಹ್ನ ಗದಗ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಓರ್ವ ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 
 
ಗದಗ ಜಿಲ್ಲೆಯ ರೋಣ ತಾಲೂಕಿನ ಜಗಳೂರು ನಿವಾಸಿ ಸಿದ್ದರಾಮಪ್ಪ ಹಂಡಿ(65) ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಲಕ್ಷ ಹಾಗೂ ಮೂರು ಲಕ್ಷ ಕೈಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ತನ್ನ 2.38 ಎಕರೆ ಜಮೀನಿನಲ್ಲಿ ಬೆಳೆ ಬೆಳೆದಿದ್ದ. ಆದರೆ ಬೆಳೆ ನಷ್ಟ ಹಾಗೂ ಸಾಲಬಾಧೆ ತಾಳಲಾರದೆ ಜಗಳೂರು ಕೆರೆಗೆ ಹಾರಿ ಆಥ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಐವರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.  
 
ಇನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದೊಡ್ಡಿನಕೊಪ್ಪ ಗ್ರಾಮದಲ್ಲಿಯೂ ಕೂಡ ಓರ್ವ ರೈತ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ರೈತನನ್ನು ಶಿವಪುತ್ರಪ್ಪ(52) ಎನ್ನಲಾಗಿದ್ದು, ಈತ 8 ಲಕ್ಷ ಸಾಲ ಮಾಡಿಕೊಂಡಿದ್ದ. ಇದರಿಂದ ಮನನೊಂದು ಆಥ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಅನವಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 
 
ಇಂದು ಬೆಳಗ್ಗೆ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಕೂಡ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಒಟ್ಟು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ವೆಬ್ದುನಿಯಾವನ್ನು ಓದಿ