ಆತ್ಮಹತ್ಯೆಯೋ? ಕೊಲೆಯೋ?

ಶನಿವಾರ, 16 ಸೆಪ್ಟಂಬರ್ 2023 (13:20 IST)
ಮಹಿಳೆ ಮತ್ತು ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಪತಿ ಮೇಲೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಕೇಳಿಬಂದಿದೆ. 24 ವರ್ಷದ ಪತ್ನಿ ಮೇಘ, ಮಕ್ಕಳಾದ 6 ವರ್ಷದ ಪುನ್ವಿತಾ, 3 ವರ್ಷದ ಮನ್ವಿತಾ ಅನುಮಾನಸ್ಪದವಾಗಿ ಮೃತ ಪಟ್ಟವರು. ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಹಾಗೂ ಮಕ್ಕಳನ್ನ ಕೊಂದು ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಪತಿ ಅಬಿ ಅಲಿಯಾಸ್ ಧನಂಜಯ್ ವಿರುದ್ಧ ಕೇಳಿಬಂದಿದೆ. ಸ್ಥಳಕ್ಕೆ ತೆರಕಣಾಂಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಿಚಾರಣೆಗೆ ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ