ಸುಳ್ವಾಡಿ ಗ್ರಾಮದ ವಿಷಾಹಾರ ಸೇವನೆ ಪ್ರಕರಣ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಶನಿವಾರ, 15 ಡಿಸೆಂಬರ್ 2018 (16:36 IST)
ಚಾಮರಾಜನಗರ ಜಿಲ್ಲೆಯ ಹನೂರಿನ ಸುಳ್ವಾಡಿ ಗ್ರಾಮದಲ್ಲಿ ವಿಷಾಹಾರ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

ವಿಷಾಹಾರ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾರಿ ಮಹದೇವನ್ನು ಹೆಚ್ಚಿನ ವಿಚಾರಣೆಗೆ ರಾಮಾಪುರ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಪೊಲೀಸ್ ವಶದಲ್ಲಿರುವವರ ಸಂಖ್ಯೆ ಮೂರಕ್ಕೆ ಏರಿಕೆಯಾದಂತೆ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿನ್ನಪ್ಪಿ, ಮಾದೇಶ, ಮಹದೇವ ಪೊಲೀಸರ ವಶದಲ್ಲಿದ್ದಾರೆ. ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ