ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳು ನ್ಯಾಯಾಲಯಕ್ಕೆ ಹಾಜರ್

ಗುರುವಾರ, 3 ಜನವರಿ 2019 (14:59 IST)
ಚಾಮರಾಜನಗರ ಜಿಲ್ಲೆಯ ಸೂಳ್ವಾಡಿ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡಿದ್ದು, ನ್ಯಾಯಾಲಯಕ್ಕೆ ಬಿಗಿ ಭದ್ರತೆಯಲ್ಲಿ ಹಾಜರುಪಡಿಸಲಾಗಿದೆ.

ಪ್ರಸಾದಕ್ಕೆ ವಿಷ ಹಾಕಿದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಳ್ಳುತ್ತಿದ್ದಂತೆ ಇಂದು ಕೊಳ್ಳೇಗಾಲ ನ್ಯಾಯಾಲಯಕ್ಕೆ ನಾಲ್ವರು ಆರೋಪಿಗಳನ್ನು ಹಾಜರ್ ಪಡಿಸಲಾಯಿತು.

14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದರು.  
 ಮೈಸೂರು ಜೈಲಿನಿಂದ ಕೊಳ್ಳೆಗಾಲ ನ್ಯಾಯಾಲಯಕ್ಕೆ ಹಾಜರಾದ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ್, ದೊಡ್ಡಯ್ಯ ಅವರು ಭದ್ರತಾ ದೃಷ್ಟಿಯಿಂದ ಈವರೆಗೆ ಮೈಸೂರು ಜೈಲಿನಲ್ಲಿದ್ದರು. 

ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆರೋಪಿಗಳ ಪರ ಬೆಂಗಳೂರು ಮೂಲದ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ ಜಿಲ್ಲೆಗಳ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸದಂತೆ ಬಾರ್ ಕೌನ್ಸಿಲ್ ನಿರ್ಧಾರದ ಹಿನ್ನೆಲೆ ಬೆಂಗಳೂರು ವಕೀಲರ ಮೊರೆ ಹೋಗಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ