ಮಂಡ್ಯ ಜನರ ಸಮಸ್ಯೆ ಪರಿಹರಿಸುವಲ್ಲಿ ಸುಮಲತಾ ಅಂಬರೀಶ್ ಗೆ ಮೊದಲ ಜಯ
ಸಂಸದೆಯ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ಸದಾನಂದ ಗೌಡ, ಕಾವೇರಿ ನಿರ್ವಹಣಾ ಮಂಡಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ಮಂಡ್ಯ ರೈತರಿಗೆ 2 ಟಿಎಂಸಿ ನೀರು ಬಿಡಲು ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ. ಈ ಮನವಿಯನ್ನು ಪುರಸ್ಕರಿಸಿರುವ ಪ್ರಾಧಿಕಾರ ಇಂದು ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದೆ ಎಂದು ಹೇಳಿದ್ದಾರೆ. ತಮ್ಮ ಪ್ರಯತ್ನಕ್ಕೆ ಮೊದಲ ಯಶಸ್ಸು ಸಿಕ್ಕಿರುವುದು ಸುಮಲತಾಗೂ ಸಂತೋಷ ನೀಡಿದ್ದು, ಟ್ವಿಟರ್ ಮೂಲಕ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ.