ಅಕ್ರಮ ಗಣಿಗಾರಿಕೆ ಬಗ್ಗೆ ಸಚಿವ ಮುರುಗೇಶ್ ನಿರಾಣಿಗೆ ದೂರು ಕೊಟ್ಟ ಸುಮಲತಾ

ಮಂಗಳವಾರ, 13 ಜುಲೈ 2021 (09:00 IST)
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್‍ ಅಕ್ರಮ ಗಣಿಗಾರಿಕೆ ವಿರುದ್ಧದ ತಮ್ಮ ಹೋರಾಟದ ವಿಚಾರದಲ್ಲಿ ಸುಮ್ಮನೇ ಕುಳಿತಿಲ್ಲ. ಇದೀಗ ಗಣಿ ಸಚಿವ ಮುರುಗೇಶ್ ನಿರಾಣಿಯವರನ್ನು ಭೇಟಿ ಮಾಡಿದ್ದಾರೆ.


ಸಚಿವ ನಿರಾಣಿಯವರನ್ನು ಭೇಟಿ ಮಾಡಿ ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರಕ್ಕೆ ಬರಬೇಕಾದ 1200 ಕೋಟಿ ರೂ. ರಾಜಧನ, ದಂಡದ ಕುರಿತು ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಸಚಿವರಿಗೆ ಲಿಖಿತ ದೂರನ್ನು ನೀಡಿದ್ದಾರೆ. ಸಂಸದೆಯ ದೂರು ಸ್ವೀಕರಿಸಿದ ಸಚಿವರು ಕೂಡಲೇ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಇನ್ನು, ನ್ಯಾಯಕ್ಕಾಗಿ ನನ್ನ ಹೋರಾಟ ಮುಂದುವರಿಯಲಿದೆ ಎಂದು ಸುಮಲತಾ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ