ಬೆಂಗಳೂರಿನಲ್ಲಿ ಬೇಸಿಗೆಯ ಅಬ್ಬರ

geetha

ಶುಕ್ರವಾರ, 9 ಫೆಬ್ರವರಿ 2024 (14:21 IST)
ಬೆಂಗಳೂರು-ಫೆಬ್ರವರಿಯಲ್ಲಿ ವಾಡಿಕೆಗಿಂತ ಬಿಸಿಲು ಹೆಚ್ಚಾಗಿದೆ.ಎಲ್ ನಿನೋ ಪ್ರಭಾವದಿಂದ ಬೇಸಿಗೆಯ ಪ್ರಭಾವ  ಹೆಚ್ಚಾಗಿದ್ದು,ಮಾರ್ಚ್,ಏಪ್ರಿಲ್ ನಲ್ಲಿ ಇನ್ನೂ  ತಾಪಮಾನ ಹೆಚ್ಚಾಗಲಿದೆ.ಮತ್ತೆ‌ ಬಿಸಿಲಿನ ಎಫೆಕ್ಟ್ ತಡೆಯಲಾರದೆ ಜನ ತತ್ತರಿಸಲಿದ್ದಾರೆ.ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಏರಿಕೆಯಾಗಲಿದೆ.ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಬಿಸಿಲು ಹೆಚ್ಚಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಚಾಮರಾಜನಗರದಲ್ಲಿ 13.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, 33 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶವಿದೆ.ಮಂಗಳೂರು ಏರ್​ಪೋರ್ಟ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಶಿವಮೊಗ್ಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ