ಭಾನುವಾರ ದಿನಪೂರ್ತಿ ಸಂಪೂರ್ಣ ನಿಷೇಧಾಜ್ಞೆ : ಡಿಸಿ ಖಡಕ್ ಆದೇಶ

ಮಂಗಳವಾರ, 19 ಮೇ 2020 (20:12 IST)
ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಲಾಕ್‌ಡೌನ್ ಅವಧಿಯಲ್ಲಿನ ಎರಡು ಭಾನುವಾರಗಳಂದು ಸಂಪೂರ್ಣ ಬಂದ್ ಮಾಡಲಾಗುತ್ತಿದೆ.

ರಾಮನಗರ ಜಿಲ್ಲೆಯಾದ್ಯಂತ ಭಾನುವಾರ ದಿನಪೂರ್ತಿ ಸಂಪೂರ್ಣ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್.  ಅರ್ಚನಾ ಆದೇಶ ಹೊರಡಿಸಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಲ್ಲೆಯಾದ್ಯಂತ ದಿನಪೂರ್ತಿ ಸಂಪೂರ್ಣ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಎ.ಪಿ.ಎಂ.ಸಿ ಮಾರುಕಟ್ಟೆ ಮತ್ತು ರೇಷ್ಮೆ ಮಾರುಕಟ್ಟೆಗಳು ಲಾಕ್‌ಡೌನ್ ಅವಧಿಯಲ್ಲಿ ಬರುವ ಈ ಎರಡು ಭಾನುವಾರಗಳಂದು ಕಾರ್ಯನಿರ್ವಹಿಸುವುದಿಲ್ಲವೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ