ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ - ಅಲೋಕ್ ಕುಮಾರ್
ಮಂಗಳವಾರ, 29 ನವೆಂಬರ್ 2022 (18:56 IST)
ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನವು ಸುಸೂತ್ರವಾಗಿ ನಡೆಯಬೇಕು. ಇದು ಚುನಾವಣೆ ವರ್ಷವಾಗಿರುವ ಕಾರಣ ಕಿಡಗೇಡಿಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಅಲೋಕ್ ಕುಮಾರ್ ತಿಳಿಸಿದ್ರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರು. ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವ ಯಾವುದೇ ಚಟುವಟಿಕೆಗೆ ನಾವು ಅವಕಾಶ ಕೊಡುವುದಿಲ್ಲ. ಖಾಸಗಿ ಕಾರ್ಯಕ್ರಮಗಳಿಗೆ ಬಂದರೆ ನಮ್ಮ ಅಭ್ಯಂತರ ಇರುವುದಿಲ್ಲ. ಬೆಳಗಾವಿ ಗಡಿಯಲ್ಲಿ 21 ಚೆಕ್ಪೋಸ್ಟ್ಗಳಿವೆ. ಗಡಿ ಭಾಗದ ಎಲ್ಲ ಎಸ್‌ಪಿಗಳಿಗೆ ಎಚ್ಚರಿಕೆಯಿಂದ ಇರುವಂತೆ ನಿರ್ದೇಶನ ನೀಡಿದ್ದೇವೆ. ಮಹಾರಾಷ್ಟ್ರ ಗಡಿಯಲ್ಲಿ ಇಂದು ಸಂಜೆಯಿಂದಲೇ ಪೊಲೀಸರು ಗಸ್ತು ಹೆಚ್ಚಿಸುತ್ತಾರೆ ಎಂದರು. ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್ಪಿ, ನಗರ ಪೊಲೀಸ್ ಆಯುಕ್ತ, ಡಿಸಿಪಿಗಳು, ಡಿವೈಎಸ್ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್ಪಿ, ಸಾಂಗ್ಲಿ ಎಸ್ಪಿ, ಸಿಂಧುದುರ್ಗ ಎಸ್ಪಿ, ಸಾವಂತವಾಡಿಯ ಡಿಎಸ್ಪಿಗಳು ಭಾಗವಹಿಸಿದ್ದರು.