ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

Sampriya

ಸೋಮವಾರ, 20 ಅಕ್ಟೋಬರ್ 2025 (12:13 IST)
Photo Credit X
ಬೆಂಗಳೂರು:  ನಿಮ್ಮ‌ ಮಕ್ಕಳನ್ನು ಸಂಘಕ್ಕೆ ಕಳುಹಿಸಿದ್ದೀರಾ? ಎಂದು ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಇದು ಅನಿವಾರ್ಯವಾಗಿದೆ. ನಾನು ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನನ್ನಾಗಿಯಲ್ಲ ಎಂದು ಶಾಸಕ ಸುನಿಲ್ ಕುಮಾರ್ ಅವರು ಹೇಳಿದ್ದಾರೆ. 

ಈ ಮೂಲಕ ನಿಮ್ಮ ಮಕ್ಕಳಿಗೆ ಲಾಠಿ, ಗನ್ ಟ್ರೈನಿಂಗ್ ಕೊಟ್ಟಿದ್ದೀರಾ ಎಂದ ಕಾಂಗ್ರೆಸ್ ನಾಯಕರ ಟೀಕೆಗೆ ಸುನಿಲ್ ಕುಮಾರ್ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಸುನಿಲ್ ಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ತಮ್ಮ ತಂದೆ ಹಾಗೂ ಮಗನೊಂದಿಗೆ ಆರ್‌ಎಸ್‌ಎಸ್ ಸಮವಸ್ತ್ರದಲ್ಲಿ ನಿಂತಿರುವ ಫೋಟೋವನ್ನು ಹಂಚಿಕೊಂಡು, ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುನಿಲ್ ಕುಮಾರ್ ಪೋಸ್ಟ್‌ನಲ್ಲಿ ಹೀಗಿದೆ: ಸಂಘ, ಸಂಘಸ್ಥಾನ, ಗಣವೇಶ ನಮಗೆ ಪ್ರಚಾರದ ಸರಕಲ್ಲ. ಅದು ಸಂಸ್ಕಾರ. ಅದು ನಮ್ಮ ಶ್ರದ್ಧೆಯ ಭಾಗ. "ಸ್ವಯಂಸೇವಕ"ತ್ವ ನಮಗೆ ಸಂಘ ನೀಡಿದ ನಿರಂತರ ಆಸ್ತಿ.ನನ್ನ ತಂದೆ ದಿ.ವಾಸುದೇವ ಸಂಘದ ಶ್ರದ್ಧೆಯ ಸ್ವಯಂಸೇವಕ. ಅವರೇ ನನ್ನನ್ನು ಸಂಘದ ಮಡಿಲಿಗೆ ಕರೆತಂದಿದ್ದು.

ಆದರೆ ಕೆಲವರು ನಿಮ್ಮ‌ ಮಕ್ಕಳನ್ನು ಸಂಘಕ್ಕೆ ಕಳುಹಿಸಿದ್ದೀರಾ ? ಎಂದು ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಇದು ಅನಿವಾರ್ಯವಾಗಿದೆ.

ನಾನು ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನನ್ನಾಗಿಯಲ್ಲ

ಅಧಿಕಾರ  ನನ್ನಪ್ಪನಿಂದ ನನಗೆ, ನನ್ನಿಂದ ನನ್ನ ಮುಂದಿನ ಪೀಳಿಗೆಗೆ" ಎಂದು ಯೋಚಿಸುವ  ಕುಟುಂಬ ರಾಜಕಾರಣದ ಪಳೆಯುಳಿಕೆಗಳಿಗೆ ಈ ಪರಂಪರೆ ಅರ್ಥವಾಗುವುದೂ ಇಲ್ಲ.

ಆದರೆ ಕೆಲವರು ನಿಮ್ಮ‌ ಮಕ್ಕಳನ್ನು ಸಂಘಕ್ಕೆ ಕಳುಹಿಸಿದ್ದೀರಾ? ಎಂದು ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಇದು ಅನಿವಾರ್ಯವಾಗಿದೆ. ನಾನು ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನನ್ನಾಗಿಯಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ