ಶೀಘ್ರದಲ್ಲೇ ಚುನಾವಣಾ ಪ್ರಚಾರ ಕಣಕ್ಕೆ ಸುನಿತಾ ಕೇಜ್ರಿವಾಲ್
ಮೂಲಗಳ ಪ್ರಕಾರ, ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಪರವಾಗಿ ಕೊಂಡ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಮಾಡಲಿದ್ದಾರೆ. ಅದಲ್ಲದೆ ದೆಹಲಿಯಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಉಳಿದ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಸುನಿತಾ ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ಎಎಪಿ, ಪೂರ್ವ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ನವದೆಹಲಿ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.