ಕೊಲೆಗೆ ಸುಪಾರಿ ಆರೋಪ : ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ ಎಫ್ಐಆರ್

ಶುಕ್ರವಾರ, 25 ನವೆಂಬರ್ 2022 (07:46 IST)
ತುಮಕೂರು : ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ.

ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಗೌರಿಶಂಕರ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು ನೀಡಿದ್ದರು.
ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿನಿಂದ ಶಾಸಕ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ