ಸುಪ್ರೀಂ ಮೆಟ್ಟಿಲೇರಿದ ಬಾನು ಮುಷ್ತಾಕ್ ದಸರಾ ಉದ್ಟಾಟನೆ, ನಾಳೆ ಮಹತ್ವದ ದಿನ

Sampriya

ಗುರುವಾರ, 18 ಸೆಪ್ಟಂಬರ್ 2025 (15:07 IST)
ನವದೆಹಲಿ: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ‌ ಪ್ರಶ್ನಿಸಿ ಇದೀಗ  ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆಗೆ ಕೋರ್ಟ್ ಒಪ್ಪಿದೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರ ಅವರ ಪೀಠದ ಮುಂದೆ ಅರ್ಜಿ ಬಂದಿದೆ. 

ಇನ್ನೇನು ದಸರಾ  ಸೆಪ್ಟೆಂಬರ್ 22 ರಂದು ಆರಂಭವಾಗಲಿದ್ದು, ಈ ಹಿನ್ನೆಲೆ ಅರ್ಜಿಯ ತುರ್ತು‌ ವಿಚಾರಣೆಗೆ  ಅರ್ಜಿದಾರರು ಮನವಿಯನ್ನು ಮಾಡಿದ್ದಾರೆ. ಈ ಹಿನ್ನೆಲೆ ನಾಳೆಯೇ ವಿಚಾರಣೆಗೆ ದಿನ‌ನಿಗದಿ‌‌ ಮಾಡಿದೆ. 

‘ಸೆಪ್ಟೆಂಬರ್ 22ರಂದು ಹಿಂದೂಯೇತರ ವ್ಯಕ್ತಿಯೊಬ್ಬರಿಗೆ ಕರ್ನಾಕದ ಮೈಸೂರು ದೇಗುಲದಲ್ಲಿ ಚಾಮುಂಡೇಶ್ವರಿ ಉತ್ಸವಕ್ಕೂ ಮುನ್ನ ನಡೆಸುವ ಅಗ್ರ ಪೂಜೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು’ ಎಂದು ಅರ್ಜಿದಾರರ ಪರ ವಕೀಲರು ಭಿನ್ನವಿಸಿಕೊಂಡರು. ಇದಕ್ಕೆ ಸಿಜೆಐ ಒಪ್ಪಿದರು.

ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದನ್ನು ವಿರೋಧಿ ಬಿಜೆಪಿ ನಾಯಕ ಪ್ರತಾಪ ಸಿಂಹ ಸೇರಿದಂತೆ ಹಲವು ಮಂದಿ ಸಲ್ಲಿಸಿದ್ದ ಪಿಐಎಲ್‌ ಅನ್ನು ಸೆಪ್ಟೆಂಬರ್ 15ರಂದು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ