ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಸಲ್ಲಿಸಿದ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಅಸ್ತು ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಮಿತಾವ್ ರಾಯ್ ಹಾಗೂ ಎ.ಎಂ.ಖಾನ್ ವಿಲ್ಕರ್ ನೇತೃತ್ವದ ಪೀಠ ಪ್ರಕಟಿಸಿದ್ದು, ಡಿಸೆಂಬರ್ 15 ರಿಂದ ಅರ್ಜಿಗಳ ವಿಚಾರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಕಾವೇರಿಯಿಂದ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ ನೀರು....
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂಕೋರ್ಟ್ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.