ಕಾವೇರಿ ನಿರ್ವಹಣಾ ಮಂಡಳಿ ರಚನೆ ಗಡುವು ಪ್ರಶ್ನಿಸಿದ ಸುಪ್ರೀಂಕೋರ್ಟ್

ಶುಕ್ರವಾರ, 30 ಸೆಪ್ಟಂಬರ್ 2016 (14:46 IST)
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸಾಧ್ಯವೇ ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ ಎಂದು ಹೇಳಲಾಗುತ್ತಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಮಂಗಳವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸಾಧ್ಯವೇ. ಅಗತ್ಯವಾದಲ್ಲಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗುವುದು ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ. 
 
ಆದರೆ, ಕೇವಲ ಮೂರು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುತ್ತೇವೆ ಎಂದು ಕೇಂದ್ರ ಸರಕಾರದ ಪರವಾಗಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಉತ್ತರಿಸಿದ್ದಾರೆ. ಹೀಗಾಗಿ ಅಕ್ಟೋಬರ್ 6 ರಂದು ವಿಚಾರಣೆ ಮುಂದೂಡಲಾಗಿದೆ. 
 
ಸೆಪ್ಟೆಂಬರ್ 20 ರಂದು ನಡೆದ ವಿಚಾರಣೆಯಲ್ಲಿ 4 ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. 
 
ಟಿಪ್ಪಣಿ ಬಿಟ್ಟು ಬೇರೆ ವಾದ ಮಾಡಲ್ಲ.....
 
ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಟಿಪ್ಪಣಿ ಬಿಟ್ಟು ಬೇರೆ ವಾದ ಮಾಡಲ್ಲ ಎಂದು ಕರ್ನಾಟಕ ಪರ ವಕೀಲ ಫಾಲಿ ಎಸ್‌ ನಾರಿಮನ್ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ