ಶಾಸನಸಭೆಯ ನಿರ್ಧಾರ ಸುಪ್ರೀಂಕೋರ್ಟ್ ಕಡೆಗಣಿಸಲು ಸಾಧ್ಯವಿಲ್ಲ: ದಿಗ್ವಿಜಯ್ ಸಿಂಗ್

ಮಂಗಳವಾರ, 27 ಸೆಪ್ಟಂಬರ್ 2016 (17:32 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶಾಸನಸಭೆಯಲ್ಲಿ ಸರ್ವಾನುಮತದಿಂದ ಕೈಗೊಂಡಿರುವ ನಿರ್ಣಯವನ್ನು ಸುಪ್ರೀಂಕೋರ್ಟ್ ಕಡೆಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸನಸಭೆಯಲ್ಲಿ ಸರ್ವಾನುಮತದಿಂದ ಕೈಗೊಂಡಿರುವ ನಿರ್ಣಯ ರಾಜ್ಯದ ಜನರ ಭಾವನೆಯನ್ನು ಪ್ರತಿನಿಧಿಸುತ್ತದೆ. ಹೀಗಾಗಿ ಈ ನಿರ್ಣಯವನ್ನು ಸುಪ್ರೀಂಕೋರ್ಟ್ ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಏನೇ ನಿರ್ಣಯ ಕೈಗೊಂಡರು ನಮ್ಮ ಬೆಂಬಲವಿದೆ. ರಾಜ್ಯ ಸರಕಾರದ ಬೆನ್ನಿಗೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಭರವಸೆ ನೀಡಿದರು. 
 
ಕಾವೇರಿ ಜಲಾನಯನ ಪ್ರದೇಶದ ನೈಜ ಪರಿಸ್ಥಿತಿಯನ್ನು ತಮಿಳುನಾಡು ಅರ್ಥ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ