ಕೈ ಜಾರಿದಳು "ಕಾವೇರಿ'': 4 ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂ ಆದೇಶ

ಶುಕ್ರವಾರ, 30 ಸೆಪ್ಟಂಬರ್ 2016 (15:16 IST)
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ 4 ದಿನದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಮಂಗಳವಾರದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸಾಧ್ಯವೇ. ಅಗತ್ಯವಾದಲ್ಲಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗುವುದು ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂಕೋರ್ಟ್‌ ತಿಳಿಸಿತು. 
 
ಆದರೆ, ಕೇವಲ ಮೂರು ದಿನಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುತ್ತೇವೆ ಎಂದು ಕೇಂದ್ರ ಸರಕಾರದ ಪರವಾಗಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಉತ್ತರಿಸಿದ್ದಾರೆ. ಹೀಗಾಗಿ ಅಕ್ಟೋಬರ್ 6 ರಂದು ಕಾವೇರಿ ವಿಚಾರಣೆ ಮುಂದೂಡಲಾಗಿತು. 
 
ಸೆಪ್ಟೆಂಬರ್ 20 ರಂದು ನಡೆದ ವಿಚಾರಣೆಯಲ್ಲಿ 4 ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ