ಸುಪ್ರೀಂಕೋರ್ಟ್ ಆದೇಶಕ್ಕೆ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಗಳವಾರ, 27 ಸೆಪ್ಟಂಬರ್ 2016 (16:07 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ಭುಗಿಲೆದ್ದಿದೆ. 
 
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಮಂಡ್ಯದ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಮೈಸೂರು-ಬೆಂಗಳೂರು ರಸ್ತೆ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಮಂಡ್ಯ ಭಾಗದ ರೈತರು ಬೀದಿಗಿಳಿದು ಭಾರಿ ಪ್ರಮಾಣದಲ್ಲಿ ಹೋರಾಟ ನಡೆಸಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. 
 
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ನಾಳೆ ಹಾಗೂ ನಾಡಿದ್ದು 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ