ಸುಪ್ರೀಂಕೋರ್ಟ್ ಕಾವೇರಿ ತೀರ್ಪು: ನಾಳೆ ಮಹತ್ವದ ಸಚಿವ ಸಂಪುಟ ಸಭೆ

ಮಂಗಳವಾರ, 27 ಸೆಪ್ಟಂಬರ್ 2016 (17:15 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಸಚಿವದ್ವಯರಾದ ಎಚ್‌.ಸಿ.ಮಹದೇವ ಪ್ರಸಾದ್ ಹಾಗೂ ಮಹದೇವಪ್ಪ ತಿಳಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಿಂದ ನಾಳೆ ಹಾಗೂ ನಾಡಿದ್ದು 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಮುಂದಿನ ನಡೆ ಕುರಿತು ಚರ್ಚೆ ನಡೆಸಲು ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ನೀಡುವ ತೀರ್ಪಿನಿಂದ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಕುರಿತು ರಾಜ್ಯದ ಜನತೆ ಸಮಾಧಾನದಿಂದ ಇರಬೇಕು. ಯಾರು ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಚಿವದ್ವಯರು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ