ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್ ತೀರ್ಪು

ಬುಧವಾರ, 17 ಜುಲೈ 2019 (10:51 IST)
ನವದೆಹಲಿ: ರಾಜೀನಾಮೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಮಹತ್ವದ ತೀರ್ಪಿನಿಂದಾಗಿ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.


ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡಿರುವ ಅತೃಪ್ತ ಶಾಸಕರು ಸದನದಲ್ಲಿ ಭಾಗವಹಿಸುವಂತೆ, ಸರಕಾರದ ಪರವಾಗಿ ವಿಶ್ವಾಸ ಮತ ಸಂದರ್ಭದಲ್ಲಿ ಮತ ಹಾಕುವಂತೆ ವಿಪ್ ಜಾರಿ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಹೇಳಿದೆ.

ಒಂದು ವೇಳೆ ವಿಪ್ ನೀಡಿದರೂ ಅದನ್ನು ಉಲ್ಲಂಘಿಸಿದರೆ ಆ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಲಾಗಿದೆ. ಹೀಗಾಗಿ ತಮ್ಮ ಮೇಲೆ ಕ್ರಮ ಕೈಗೊಂಡು ತಮ್ಮ ರಾಜಕೀಯ ಭವಿಷ್ಯಕ್ಕೆ ಕುತ್ತು ಬಂದರೆ ಎಂಬ ಅತೃಪ್ತರ ಆತಂಕ ಈ ಮೂಲಕ ದೂರವಾಗಿದೆ. ಇದು ಅತೃಪ್ತರ ಪಾಲಿಗೆ ಬಿಗ್ ರಿಲೀಫ್. ಆದರೆ ನಾಳೆ ವಿಶ್ವಾಸ ಮತ ಯಾಚನೆ ಮಾಡಲಿರುವ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಿಗೆ ಇದು ಕಂಟಕವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ