ಅಸಹಜ ಲೈಂಗಿಕ ಪ್ರಕರಣ: ಸೂರಜ್ ರೇವಣ್ಣಗೆ ಇಂದು ಬಿಡುಗಡೆಯ ಭಾಗ್ಯ

Krishnaveni K

ಮಂಗಳವಾರ, 23 ಜುಲೈ 2024 (10:07 IST)
ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧದಲ್ಲಿದ್ದ ಎಂಎಲ್ ಸಿ ಸೂರಜ್ ರೇವಣ್ಣಗೆ ಜಾಮೀನು ಸಿಕ್ಕಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ಎರಡು ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂದಿಸಿದಂತೆ ಸಿಐಡಿ ಬಲೆಯಲ್ಲಿದ್ದ ಸೂರಜ್ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧದಲ್ಲಿದ್ದರು.

ಇದೀಗ ನಿನ್ನೆ ಸೂರಜ್ ಗೆ ಎರಡೂ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಅವರೀಗ ಸದ್ಯಕ್ಕೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ನಿನ್ನೆಯಷ್ಟೇ ಕೋರ್ಟ್ ತೀರ್ಪು ಬಂದಿದ್ದು, ಜೈಲು ಅಧಿಕಾರಿಗಳಿಗೆ ಇದರ ಪ್ರತಿ ಬಂದ ಬಳಿಕ ಇಂದು ಸೂರಜ್ ಹೊರಬರಲಿದ್ದಾರೆ.

ಸೂರಜ್ ಮತ್ತು ಪ್ರಜ್ವಲ್ ಇಬ್ಬರೂ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರಜ್ವಲ್ ಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರಿಗೆ ಸದ್ಯಕ್ಕೆ ಬಿಡುಗಡೆಯ ಭಾಗ್ಯವಿಲ್ಲ. ಈಗ ಅಣ್ಣ ಸೂರಜ್ ಬಿಡುಗಡೆಯಾಗುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ