ಜುಲೈ 18ರವರೆಗೆ ಸೂರಜ್‌ ರೇವಣ್ಣಗೆ ಜೈಲೇ ಗತಿ

Sampriya

ಮಂಗಳವಾರ, 9 ಜುಲೈ 2024 (17:46 IST)
ಬೆಂಗಳೂರು:ಯುವಕನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ.

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಯುವಕನೊಬ್ಬ ಹೊಳೆನರಸೀಪುರದಲ್ಲಿ ನೀಡಿದ ದೂರಿನ ಅನ್ವಯ ಸೂರಜ್ ರೇವಣ್ಣ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇನ್ನೂ ಪ್ರಕರಣ ಸಂಬಂಧ ಸೂರಜ್ ರೇವಣ್ಣ ಪರ ಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ  ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್‌ ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ