ಸಿಎಂ ಬದಲಾವಣೆಯ ಸುಳಿವು ಕೊಟ್ಟ ಸುರೇಶ್ ಗೌಡ
ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ 1 ವರ್ಷದ ಅವಧಿಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಆದರೆ ಪಕ್ಷ ಏನು ನಿರ್ಧಾರ ತೆಗೆದು ಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ. ಅವರು ಅದರ ಬಗ್ಗೆ ಮಾತನಾಡಿಲ್ಲ. ಅದು ಮಾಧ್ಯಮದ ಸೃಷ್ಟಿ. ಆದರೆ ಅವರು ಮುಖ್ಯಮಂತ್ರಿ ಆದರೆ ಸಂತೋಷ ಎಂದು ತಿಳಿಸಿದರು.