ಆಗಸ್ಟ್ ಬಳಿಕ ಶಾಲೆ - ಕಾಲೇಜು ಪ್ರಾರಂಭ ಎಂದ ಸಚಿವ ಸುರೇಶ್ ಕುಮಾರ್

ಗುರುವಾರ, 2 ಜುಲೈ 2020 (16:30 IST)
ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯುವ ದಿನದ ಬಗ್ಗೆ ಇನ್ನು ತೀರ್ಮಾನ ಕೈಗೊಂಡಿಲ್ಲ.

ಆಗಸ್ಟ್ ತಿಂಗಳ ನಂತರವಷ್ಟೇ ಈ ಬಗ್ಗೆ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹಾಗಾಗಿ ಶಾಲಾ ಆರಂಭ ದಿನದ ಕುರಿತು ನಾವ್ಯಾರು ಕೂಡ ಇನ್ನು ನಿರ್ಧಾರ ತೆಗೆದುಕೊಳ್ಳುವ ಸ್ಥಿತಿಯಲಿಲ್ಲ.

ಶಾಲೆ ಆರಂಭಿಸುವ ಕುರಿತು ಈಗಾಗಲೇ ಪೋಷಕರ ಅಭಿಪ್ರಾಯಗಳನ್ನು ಕ್ರೂಢೀಕರಿಸಲಾಗಿದ್ದು, ಆಗಸ್ಟ್ ತಿಂಗಳ ನಂತರ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚರ್ಚಿಸಿ ಒಂದು ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ