ಶಿವಣ್ಣ ದಂಪತಿಗೆ ಸುರ್ಜೇವಾಲ ಧನ್ಯವಾದ
ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಭೇಟಿ ನೀಡಿದ್ದು, ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದಾರೆ. ಹಿಂದೆ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವರಾಜ್ ಕುಮಾರ್ ಬೇಸರಗೊಂಡಿದ್ದರು. ಹೀಗಾಗಿ ಶಿವಕುಮಾರ್ ಕುಮಾರ್ ಭೇಟಿ ಮಾಡಿ ಸುರ್ಜೇವಾಲಾ ಮಾತುಕತೆ ನಡೆಸಿದ್ದಾರೆ. ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅವರು ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವರ ಪರವಾಗಿ ಪ್ರಚಾರ ನಡೆಸಿದ್ದರು. ಭೇಟಿಯ ಬಗ್ಗೆ ಸುರ್ಜೇವಾಲಾ ತಮ್ಮ ಟ್ವಿಟರ್ ಖಾತೆಯಲ್ಲೂ ಬರೆದುಕೊಂಡಿದ್ದು, ಧನ್ಯವಾದ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಗೀತಾ ಶಿವರಾಜ್ ಕುಮಾರ್ ಈಗಾಗಲೇ ಕಾಂಗ್ರೆಸ್ ಕುಟುಂಬದ ಭಾಗವಾಗಿದ್ದಾರೆ. ಅಭಿವೃದ್ಧಿ ಮತ್ತು ಸಮೃದ್ಧಿಯ ಪ್ರತಿಜ್ಞೆಯ ಮೇಲೆ #Karnatakaವನ್ನು ಕೊಂಡೊಯ್ಯಲು ನಾವು ಬದ್ಧರಾಗಿದ್ದೇವೆ.” ಎಂದು ಬರೆದುಕೊಂಡಿದ್ದಾರೆ.