ಸುರ್ಜೇವಾಲ ಸಭೆ ಮಾಡಿ ಕಾನೂನು ಉಲ್ಲಂಘನೆ ಮಾಡಿದ್ದಾರೆ : ಅಶ್ವಥ್ ನಾರಾಯಣ್

ಬುಧವಾರ, 14 ಜೂನ್ 2023 (11:18 IST)
ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ಸಭೆ ಮಾಡಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಕ್ರಮ ಆಗಬೇಕು ಅಂತ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
 
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲ ಅಧಿಕಾರಿಗಳ ಸಭೆ ಮಾಡಿರೋದು ಖಂಡನೀಯ. ಕಾಂಗ್ರೆಸ್ ಪಕ್ಷದಿಂದ ಅಧಿಕಾರ ದುರ್ಬಳಕೆ ಆಗಿದೆ. ಇದಕ್ಕೆ ಅವಕಾಶ ಕೊಡಬಾರದು. ನಾವು ಈ ಸಂಬಂಧ ರಾಜ್ಯಪಾಲ ಪಾಲರಿಗೆ ದೂರು ಕೊಡ್ತೀವಿ. ರಾಜ್ಯಪಾಲರು ಕಾಂಗ್ರೆಸ್ ಕಿವಿ ಹಿಂಡೋ ಕೆಲಸ ಮಾಡಬೇಕು ಅಂತ ಮನವಿ ಮಾಡ್ತೀವಿ ಎಂದರು.

ಖಾಸಗಿ ಹೊಟೇಲ್ ನಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಅವರ ಸಭೆ ಉದ್ದೇಶ ಏನು ಗೊತ್ತಿಲ್ಲ. ಸರ್ಕಾರದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬಾರದು. ಇದರಲ್ಲಿ ಕಾನೂನು ಉಲ್ಲಂಘನೆ ಆಗಿದೆ.
.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ