ಚಂದ್ರಯಾನ ಯಶಸ್ವಿಯಾದ ಬೆನ್ನಲ್ಲೇ ಇಸ್ರೊ 2023ರ ಸೆಪ್ಟೆಂಬರ್‌ನಲ್ಲಿ ಸೂರ್ಯನ ಅಧ್ಯಯನಕ್ಕೆ ನೌಕೆಯನ್ನು ಕಳುಹಿಸಲು ಸಿದ್ಧತೆ ನಡೆಸಿದೆ. 'ಆದಿತ್ಯ-ಎಲ್1' ಹೆಸರಿನ ಈ ಯೋಜನೆಯಡಿ 5 ವರ್ಷಗಳ ಕಾಲ ಇಸ್ರೊ ಸೂರ್ಯನ ಅಧ್ಯಯನ ಕೈಗೊಳ್ಳಲಿದೆ. ಸೂರ್ಯನನ್ನು ವಿವಿಧ ಕೋನಗಳಿಂದ ಅಧ್ಯಯನ ಮಾಡುವುದು, ಸೂರ್ಯನ ಸುತ್ತಲಿನ ವಾತಾವರಣ, ಸೌರ ಮಾರುತ, ಉಷ್ಣಾಂಶ ಇತ್ಯಾದಿ ವಿಷಯಗಳ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರಯಾನ ಯಶಸ್ವಿ ಬಳಿಕ ಇಸ್ರೊ ಅಧ್ಯಕ್ಷ ಸೋಮನಾಥ್ ಅವರೇ ಈ ಬಗ್ಗೆ ಪ್ರಕಟಿಸಿದ್ದಾರೆ.