ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಸ್ಪೋಟ
ಅನುಮಾನಾಸ್ಪದ ಬಾಕ್ಸ್ ಇದ್ದಕ್ಕಿದಂತಯೇ ಬ್ಲಾಸ್ಟ್ ಆಗಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಇನ್ನೂ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ಸ್ಪೋಟಗೊಂಡ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಶ್ವಾನದಳದೊಂದಿಗೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಸ್ಪೋಟಗೊಂಡ ವಸ್ತು ಮಗುವಿನ ಆಟವಾಡುತ್ತಿದ್ದ ಸಾಮಗ್ರಿ ಆಗಿದೆ ಎಂದು ಪೊಲೀಸರು ಹೇಳಿದ್ದರೂ ತನಿಖೆ ಮುಂದುವರಿಸೋದಾಗಿ ಹೇಳಿದ್ದಾರೆ.
ಶಾಸಕಿ ಅಂಜಲಿ ನಿಂಬಾಳ್ಕರ್ ಹೆಸರಿನಲ್ಲಿ ಬಂದಿರುವ ಈ ಬಾಕ್ಸ್ ಯಾರು ಕಳುಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.