ಧಾರವಾಡ ಎಸ್‌ಪಿ, ಡಿವೈಎಸ್‌ಪಿಯನ್ನು ಅಮಾನತುಗೊಳಿಸಿ: ಕರವೇ

ಮಂಗಳವಾರ, 2 ಆಗಸ್ಟ್ 2016 (16:56 IST)
ಯಮನೂರಿನಲ್ಲಿ ಪೊಲೀಸರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಿದರೆ ಸಾಲದು. ಧಾರವಾಡ ಎಸ್‌ಪಿ ಹಾಗೂ ಡಿವೈಎಸ್‌ಪಿ ಅವರನ್ನು ಅಮಾನತು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಆಗ್ರಹಿಸಿದ್ದಾರೆ.
 
ಧಾರವಾಡ ಜಿಲ್ಲೆಯ ಯಮನೂರು ಗ್ರಾಮಕ್ಕೆ ಭೇಟಿ ನೀಡಿದ ಅವರು, ಯಮನೂರು ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಕಾನ್ಸ್‌ಟೇಬಲ್‌‌ಗಳನ್ನು ಅಮಾನತು ಮಾಡಿದರೇ ಸಾಲದು. ಧಾರವಾಡ ಎಸ್‌ಪಿ ಧರ್ಮೇಂದ್ರ ಕುಮಾರ್ ಮೀನಾ ಹಾಗೂ ಡಿವೈಎಸ್‌ಪಿ ಎಸ್‌.ಎಂ.ಓಲೇಕಾರ್ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
 
ಮಹದಾಯಿ ನ್ಯಾಯಾಧೀಕರಣದಲ್ಲಿ ರಾಜ್ಯಕ್ಕೆ ಹಿನ್ನೆಡೆಯಾಗಿದೆ ಎಂದು ಆಕ್ರೋಶಗೊಂಡ ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಧಾರವಾಡ ಪೊಲೀಸರು ಪ್ರತಿಭಟನಾ ನಿರತ ರೈತರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕುಡಿಯಲು ನೀರು ಕೇಳಿದವರ ಮೇಲೆ ದೌರ್ಜನ್ಯ ಎಸಗಿರುವುದನ್ನು ನೋಡಿದರೆ ರಾಜ್ಯದಲ್ಲಿ ಹಿಟ್ಲರ್ ಆಡಳಿತ ನಡೆಯುತ್ತಿದೆಯೇ ಎಂದು ಅನುಮಾನ ಬರುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ, ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ