ಇಂದು ವಿಧಾನಸೌಧದಲ್ಲಿ ನೂತನ ಶಾಸಕರಿಂದ ಪ್ರಮಾಣವಚನ ಸ್ವೀಕಾರ

ಭಾನುವಾರ, 22 ಡಿಸೆಂಬರ್ 2019 (11:03 IST)
ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರು ಇಂದು ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕರಿಸಲು ಸಿದ್ದತೆ ಮಾಡಲಾಗಿದ್ದು, ಉಪಚುನಾವಣೆಯಲ್ಲಿ ಗೆದ್ದ ಎಲ್ಲಾ ಬಿಜೆಪಿ ಶಾಸಕರು, ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.


ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗವಹಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ