ಎಸ್‍‌.ಎಂ.ಕೃಷ್ಣಗೆ ಟಿ.ಬಿ.ಜಯಚಂದ್ರ ಸವಾಲ್

ಸೋಮವಾರ, 3 ಏಪ್ರಿಲ್ 2017 (17:19 IST)
ಉಪಚುನಾವಣೆ ಫಲಿತಾಂಶದವರೆಗೆ ಕಾಯಿರಿ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿ ಇದೆಯೋ ಇಲ್ಲವೋ ಎನ್ನುವುದು ಗೊತ್ತಾಗಲಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಮಾಜಿ ಸಚಿವ ಎಸ್.ಎಂ.ಕೃಷ್ಣಗೆ ಟಾಂಗ್ ನೀಡಿದ್ದಾರೆ.
   
ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಉಳಿದಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲಿದೆ ಹುಡುಕಿಕೊಡಿ ಎಂದು ಮಾಜಿ ಸಿಎಂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಇಂದು ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ. ಆವಾಗ ಕಾಂಗ್ರೆಸ್ ಪಕ್ಷ ಅಸ್ತಿತ್ವದ ಬಗ್ಗೆ ಮನವರಿಕೆಯಾಗಲಿದೆ ಎಂದು ಬಿಜೆಪಿ ಮುಖಂಡರಿಗೆ ಸಚಿವ ಟಿ.ಬಿ.ಜಯಚಂದ್ರ ತಿರುಗೇಟು ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ