ಬಿಜೆಪಿಯವರು ಶಾಂತಿ ಕದಡಿದ್ರೆ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಸಿಎಂ ಸೂಚನೆ
ಸೋಮವಾರ, 4 ಸೆಪ್ಟಂಬರ್ 2017 (15:17 IST)
ಬಿಜೆಪಿ ನಡೆಸುತ್ತಿರುವ ಮಂಗಳೂರು ಚಲೋ ಕಾರ್ಯಕ್ರಮವನ್ನು ತಡೆಯುವುದು ಬೇಡ. ಶಾಂತಿ ಕದಡಿದ್ರೆ ಕ್ರಮಕೈಗೊಳ್ಳಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನಾಳೆಯಿಂದ ಬಿಜೆಪಿಯ ಮಂಗಳೂರು ಚಲೋ ಆರಂಭವಾಗಲಿದ್ದು , ಬೈಕ್ ರ್ಯಾಲಿಗಾಗಿ ಸಿದ್ದತೆಗಳು ನಡೆಯುತ್ತಿವೆ. ಶಾಂತಿಯುತವಾಗಿ ಹೋರಾಟ ನಡೆಸಬೇಕು. ಪ್ರಜಾಪ್ರಭುತ್ವದಲ್ಲಿ ಕಾನೂನಿನಂತೆ ಹೋರಾಟ ನಡೆಸಿದರೆ ನಮ್ಮ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.
ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ಶಾಂತಿ ನೆಲೆಸಿದ. ಶಾಂತಿ ಕದಡುವಂತಹ ಕೆಲಸ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.