ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ಕೇಂದ್ರ ಸರಕಾರ, ಕಾರ್ಯಾಂಗ ಹಾಗೂ ನ್ಯಾಯಾಂಗದ ಮೇಲೆ ತಮಿಳುನಾಡಿನ ಪ್ರಭಾವ ಹೆಚ್ಚಿದೆ. ಹೀಗಾಗಿ ಕಾವೇರಿ ವಿಷಯದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಮೇಲುಸ್ತುವಾರಿ ಸಮಿತಿಯ ಮುಂದೆ ನಮ್ಮ ಅಧಿಕಾರಿಗಳು ಸೂಕ್ತವಾದ ವಾದ ಮಂಡಿಸುವಲ್ಲಿ ವಿಫಲರಾಗಿದ್ದಾರೆ. ವಿವಾದವನ್ನು ಇತ್ಯರ್ಥಗೊಳಿಸಲು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಅನುಭವ ಸಾಲದು. ಕಾವೇರಿ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳಿಗೆ ಕರೆ ಮಾಡಿದರೇ ಅವರು ಕರೆಯೇ ಸ್ವೀಕರಿಸದೇ ನುಣುಚಿಕೊಳ್ಳುತ್ತಾರೆ ಎಂದು ಆರೋಪಿಸಿದರು.