ತಂಪೆರೆದ ವರುಣ : ಬೇಸಿಗೆ ಮಳೆಗೆ ಅಪಾರ ಬೆಳೆಗಳು ನಾಶ

ಶನಿವಾರ, 8 ಏಪ್ರಿಲ್ 2023 (08:55 IST)
ಬೆಂಗಳೂರು : ರಾಜ್ಯದಲ್ಲಿ ರಣಬಿಸಿಲಿನ ಮಧ್ಯೆ ಹಲವೆಡೆ ವರುಣನ ಆಗಮನವಾಗಿದೆ. ಹಲವೆಡೆ ನಾನಾ ಅವಾಂತರಗಳು ಸೃಷ್ಟಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಸುರಿದ ಭಾರೀ ವರ್ಷಧಾರೆಗೆ ಅನ್ನದಾತರು ತೀವ್ರ ಸಂಕಷ್ಟಕ್ಕೀಡಾಗಿದ್ದಾನೆ.

ಕೃಷಿ ಉತ್ಪನ್ನ ಮಾರುಕಟ್ಟೆಗೆ ತಂದಿದ್ದ ಬೆಳೆ ನೀರಲ್ಲಿ ಒದ್ದೆಯಾಗಿದ್ರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಇದನ್ನೇ ದಳ್ಳಾಳಿಗಳು ಬಂಡವಾಳ ಮಾಡಿಕೊಂಡಿದ್ದು, ಕಡಿಮೆ ಬೆಲೆಗೆ ಖರೀದಿಸ್ತಿದ್ದಾರೆ.

ಚಿಕ್ಕೋಡಿ ಉಪ ವಿಭಾಗದ ವಿವಿಧೆಡೆ ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಹುಕ್ಕೇರಿ, ರಾಯಬಾಗ, ಚಿಕ್ಕೋಡಿ ತಾಲೂಕಿನಲ್ಲಿ ಬಿಸಿಲಿಗೆ ರೋಸಿ ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಕೆಲಹೊತ್ತು ಭಾರೀ ಮಳೆಯಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.  

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪಟ್ಟಣದ ಗವಿಸಿದ್ದೇಶ್ವರ ಮಠದಲ್ಲಿ ಮರಕ್ಕೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಸೋವೇನಹಳ್ಳಿ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು ಮಾವು, ಬತ್ತದ ಬೆಳೆಗೆ ಹಾನಿಯಾಗಿದೆ. ರೈತರಲ್ಲಿ ಆತಂಕ ಹೆಚ್ಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ