ಸಿಎಂ ಯಡಿಯೂರಪ್ಪಗೆ ಟಾಂಗ್ ನೀಡಿದ ಹೊರಟ್ಟಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಭರ್ಜರಿಯಾಗಿ ಟಾಂಗ್ ನೀಡಿದ್ದಾರೆ.
ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಈಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದು ರೈತರ ಬಾಯಿಯಲ್ಲಿ ಸರಕಾರ ಮಣ್ಣು ಹಾಕಿದಂತೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿ, ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದು, ಈಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಬಂದರೆ ಜಮೀನನ್ನು ಮಾರಿಕೊಳ್ಳುವ ಸ್ಥಿತಿಗೆ ಬರುತ್ತಾರೆ ಎಂದಿದ್ದಾರೆ. ಸರ್ಕಾರ ಉದ್ದಿಮೆದಾರರ ಕೈಗೊಂಬೆಯಾಗದೇ ರೈತರ ಹಿತ ಕಾಪಾಡಬೇಕು ಎಂದು ಹೊರಟ್ಟಿ ಹೇಳಿದ್ದಾರೆ.