ತನ್ವೀರ್ ಸೇಠ್ ಪ್ರಕರಣ: ವರದಿ ಬಂದ ನಂತ್ರ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಶುಕ್ರವಾರ, 11 ನವೆಂಬರ್ 2016 (13:53 IST)
ಟಿಪ್ಪು ಜಯಂತಿ ವೇಳೆ ಅರೆನಗ್ನ ಚಿತ್ರ ವೀಕ್ಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಟಿವಿ ಮಾಧ್ಯಮಗಳಲ್ಲಿ ಬಿತ್ತರವಾಗಿರುವುದು ಸಳ್ಳು ಸುದ್ದಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಡೆದ ಘಟನೆಯ ಬಗ್ಗೆ ವರದಿ ನೀಡುವಂತೆ ಆದೇಶಿಸಿದ್ದೇನೆ. ವರದಿ ಬಂದ ನಂತರ ಒಂದು ವೇಳೆ ಸಚಿವ ತನ್ವೀರ್ ಸೇಠ್ ತಪ್ಪು ಮಾಡಿದ್ದಲ್ಲಿ ಅವರ ವಿರುದ್ಧ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇನೆ ಎಂದರು.
 
ಯಡಿಯೂರಪ್ಪ, ಕರಂದ್ಲಾಜೆ ಸೇರಿದಂತೆ ಪ್ರತಿಯೊಬ್ಬರ ಹೇಳಿಕೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ವರದಿ ಬಂದ ನಂತರವಷ್ಟೆ ಸಚಿವನ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಖಚಿತ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ