ತಾಂಜೇನಿಯಾ ವಿದ್ಯಾರ್ಥಿನಿ ಪ್ರಕರಣ: ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಶನಿವಾರ, 6 ಫೆಬ್ರವರಿ 2016 (13:46 IST)
ಆಫ್ರಿಕಾ ದೇಶದ ವಿದ್ಯಾರ್ಥಿಗಳು ನಗರದಲ್ಲಿ ಪುಂಡಾಟಿಕೆ ನಡೆಸುತ್ತಿದ್ದು, ಸ್ಥಳೀಯರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
 
ನಗರದ ಪೀಣ್ಯ 8ನೇ ಮೈಲಿಯಿಂದ ಪ್ರತಿಭಟನೆ ಆರಂಭಿಸಿದ ಕರವೇ ಕಾರ್ಯಕರ್ತರು, ಆಫ್ರಿಕಾ ವಿದ್ಯಾರ್ಥಿಗಳ ಪುಂಡಾಟಿಕೆ, ದೌರ್ಜನ್ಯ ನಿರಂತರವಾಗಿ ಮುಂದುವರಿದಿದ್ದು, ಅವರನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.
 
ಪ್ರವೀಣ್ ಶೆಟ್ಟಿ ನೇತೃತ್ವದ ಕರವೇ ಕಾರ್ಯಕರ್ತರು ಇಂದು ಬೆಳಿಗ್ಗೆಯಿಂದಲೇ ಪ್ರತಿಭಟನೆ ಆರಂಭಿಸಿ, ನಂತರ ಡಿಸಿಪಿ ಸುರೇಶ್ ಅವರಿಗೆ ತಮ್ಮ ಮನವಿ ಪತ್ರ ಸಲ್ಲಿಸಿದರು. 
 
ಹೆಸರಘಟ್ಟ ಪ್ರದೇಶದಲ್ಲಿ ತಾಂಜೇನಿಯಾ ವಿದ್ಯಾರ್ಥಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯಾಗುತ್ತಿದ್ದಂತೆ ಮಹಿಳೆಯರು ರಸ್ತೆಯಲ್ಲಿ ತಿರುಗಾಡದಂತಾಗಿದೆ. ರಾತ್ರಿಹೊತ್ತಿನಲ್ಲಿ ಕುಡಿದ ಮತ್ತಿನಲ್ಲಿರುವ ವಿದ್ಯಾರ್ಥಿಗಳು ಸ್ಥಳೀಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ, ಸ್ಥಳೀಯರಿಗೆ ಇಲ್ಲಿ ರಕ್ಷಣೆಯಿಲ್ಲದಂತಾಗಿದೆ ಎಂದು ಕರವೇ ಕಾರ್ಯಕರ್ತರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ