ಡೇರ್ ಡೇವಿಲ್ ಮುಸ್ತಫಾ ಚಿತ್ರಕ್ಕೆ ತೆರಿಗೆ ವಿನಾಯಿತಿ
ಸಾಹಿತ್ಯ ಆಸಕ್ತರು ಹಾಗೂ ಸಿನಿಪ್ರಿಯರ ಗಮನ ಸೆಳೆದ ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಚಿತ್ರ ನೋಡಿದ ಅನೇಕರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇತ್ತೀಚೆಗೆ 25 ದಿನಗಳನ್ನು ಪೂರೈಸಿದ ಡೇರ್ಡೆವಿಲ್ ಮುಸ್ತಫಾ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಸಿಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಶಶಾಂಕ್ ಸೋಗಾಲ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶಿಶಿರ್ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್ ಭಾರದ್ವಾಜ್, ಆಶಿತ್ ಶ್ರೀವತ್ಸಾ, ಅಭಯ್, ಮಂಡ್ಯ ರಮೇಶ್, ಉಮೇಶ್, ಪ್ರೇರಣಾ ಮುಂತಾದ ಕಲಾವಿದರು ಡೇರ್ಡೆವಿಲ್ ಮುಸ್ತಫಾ ಸಿನಿಮಾದಲ್ಲಿ ನಟಿಸಿದ್ದಾರೆ.