ತುಮಕೂರು: ಪ್ರವಾಸಕ್ಕೆ ತೆರಳಿದ್ದ ಕೊರಟಗೆರೆಯ ಬೊಮ್ಮಲದೇವಿ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮೂವರು ಶಿಕ್ಷಕರು ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಪ್ರವಾಸ ಮುಗಿಸಿ ವಾಪಾಸಗುತ್ತಿದ್ದ ವೇಳೆ ವಿದ್ಯಾರ್ಥಿಗಳು ಬಸ್‌ನಲ್ಲಿ ಡ್ಯಾನ್ಸ್ ಮಾಡಿ ಸುಸ್ತಾಗಿದ್ದರು. ಈ ವೇಳೆ ಕುಡಿಯಲು ನೀರು ಕೇಳಿದಾಗ ಶಿಕ್ಷಕರಾದ ಸಚ್ಚಿದಾನಂದ್, ಶೇಕ್ ಮುಜಾಮಿಲ್ ಮತ್ತು ಧನ್‌ಸಿಂಗ್ ರಾಥೋಡ್ ಅವರು ಮದ್ಯ ಬೆರೆಸಿದ ನೀರನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದರಿಂದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಹಲವರು ವಾಂತಿ ಮಾಡಿಕೊಂಡರೆ, ಇನ್ನು ಕೆಲವರು ತಲೆ ಸುತ್ತಿನಿಂದ ಕೆಳಕ್ಕೆ ಬಿದ್ದರು ಎಂದು ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಕುರಿತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ